+919902917269 | info@vijayadasaru.in
। Hari Sarvottama • Vayu Jeevottama ।
In This Page
  • Loading…
Back

Gajendra Mokosha

Sri Vadirajaru
ಗಜೇಂದ್ರ ಮೋಕ್ಷ

ಗಜೇಂದ್ರ ಮೋಕ್ಷ

ಭಕ್ತಿ • ಶರಣಾಗತಿ • ಶ್ರೀಹರಿಯ ಕರುಣೆ

ನಾರಾಯಣ ಕೃಷ್ಣ

ಶ್ರೀನಾಥ ಪಾರ್ವತಿಯ ನಾಥ ಶರಣೆಂಬೆ | ವಾಣಿ ಭಾರತಿಯ ಗಜಮುಖನ ಬಲಗೊಂಬೆ || ನಾನು ಬಲ್ಲಷ್ಟು ಪೇಳುವೆನು ಈ ಕಥೆಯ | ಶ್ರೀನಾಥ ಗಜರಾಜಗೊಲಿದ ಸಂಗತಿಯ || ೧ ||

ಭಪನ್ನ ದೇಶ ದೇಶದ ರಾಯರೊಳಗೆ | ಉತ್ತಮದ ದೇಶ ಗೌಳಾದೇಶದಲ್ಲಿ || ವಿಷ್ಣು ಭಕ್ತರೊಳು ಇಂದ್ರದ್ಯುಮ್ನ ನೃಪನು | ಮತ್ತೆ ಭೂಸುರರ ಪಾಲಿಸುತ್ತಿದ್ದ ತಾನು || ೨ ||

ಚಿತ್ತದಲ್ಲಿ ನರಹರಿಯ ನೆನೆದು ಚಿಂತಿಸುತ | ಪುತ್ರಮಿತ್ರಾದಿ ಬಂಧುಗಳ ವರ್ಜಿಸುತ || ಧ್ಯಾನದಲಿ ನರಹರಿಯ ನೆನೆದು ಚಿಂತಿಸುತ | ಆನೆಕುದುರೆಯ ರಾಜ್ಯಗಳನು ತ್ಯಜಿಸುತ್ತ || ೩ ||

ಸರ್ಪಶಯನನ ಧ್ಯಾನದಲ್ಲಿದ್ದ ತಾನು | ಮತ್ತೆ ತ್ರಿಕೊಟಪರ್ವತಕಾಗಿ ಬಂದು || ನಾಗಶಯನನ ಧ್ಯಾನದಲ್ಲಿದ್ದ ತಾನು | ಮೇರುಮಂದರದ ಸಮೀಪಕ್ಕೆ ಬಂದು ||೪ ||

ಸಿದ್ದ ಕಿನ್ನರರು ಗಂಧರ್ವರಿಗೆ ಸ್ಥಾನ | ಎದ್ದೆದ್ದು ಕುಣಿವ ಮೃಗಖಗಗಳ ಸೀಮ || ಎತ್ತ ನೋಡಲು ನಾಲ್ಕು ದೇಶ ವಿಸ್ತೀರ್ಣ | ಸುತ್ತ ಸುವರ್ಣಮಯ ವಸ್ತುಗಳ ಧಾಮ || ೫ ||

ಹಲವು ನದಿ ಹಲವು ಕೊಳ ಹಲವು ಸರೋವರದಿ | ಹಲವು ಪರಿ ಪುಷ್ಪಗಳು ಮೆರೆವ ಅಳಿಕುಲದಿ || ಚೆಲುವ ಗಂಧರ್ವ ಕಿನ್ನರಿಯರ ಸ್ಥಾನ | ಕುಣಿವ ನವಿಲುಗಳ ಗಿಳಿಕೋಗಿಲೆಯ ಗಾನ || ೬ ||

ಬಂದು ನದಿಯಲ್ಲಿ ಸ್ನಾನವನ ಮಾಡಿದನು | ಚಂದ ದಿಕ್ಕಿದನು ದ್ವಾದಶ ನಾಮಗಳನು || ಸಂಧ್ಯಾವಂದನೆ ಮಾಡಿ ಪದ್ಮ ಆಸನದಿ | ಇಂದಿರಾಪತಿಯ ಮನದೊಳಗಿರಿಸಿ ತಾನು || ೭ ||

ಅಂದಾಗ ಆಯೆಡೆಗೆ ಅಗಸ್ತ್ಯಮುನಿ ಬಂದ | ನಿಂದಿರ್ದು ವಂದನೆಯ ಮಾಡಲಿಲ್ಲೆಂದ || ಎಂದೆನುತ ಮನದಿ ಕೋಪಿಸುತ ಶಾಪಿಸಿದ | ಕುಂಜರದ ರೂಪಾಗಿ ಜನಿಸು ಹೋಗೆಂದ || ೮ ||

ತಪ್ಪುಂಟು ಮಹರ್ಷಿಯೆ ಕೇಳು ಬಿನ್ನಪವ | ವಿಶ್ಯಾಪ ಎಂದಿಗಾಗುವುದೆನುತ ಪೇಳು || ವಿಷ್ಣು ಚಕ್ರವು ಬಂದು ನಿನ್ನ ಸೋಕುತಲೆ | ವಿಶ್ಯಾಪ ಅಂದಿಗಾಗುವುದೆಂದು ಪೇಳೆ || ೯ ||

ಜ್ಞಾನವಡಗಿದವು ಅಜ್ಞಾನ ವಾವರಿಸೆ | ಸೂರ್ಯ ಮುಳುಗಿದನು ಕತ್ತಲೆ ಮುಸುಕಂತೆ || ಧ್ಯಾನಿಸುತ ಹಿಂದುಮುಂದಾಗ ಕುಳಿತಿರಲು | ಅನೆಯಾದನು ನೃಪನು ಆ ಕ್ಷಣದಿ ತಾನು || ೧೦ ||

ಅಚ್ಯುತಾನಂತ ಶ್ರೀಹರಿಯೆನ್ನ ಕಾಯೋ | ಸಚ್ಚಿದಾನಂದ ಸರ್ವೇಶ್ವರನೆ ಕಾಯೋ || ಭಕ್ತವತ್ಸಲನೆ ಭವಭಂಜನನೆ ಕಾಯೋ | ಕಷ್ಟಪಡುತೇನೆ ಕರುಣಿಸಿ ಕರುಣಿ ಕಾಯೋ || ೨೧ ||

ವೇದಗಳ ಕದ್ದು ಕೊಂಡೊಯ್ದ ದಾನವನ | ಸಾಧಿಸಿದೆ ಭೇಧಿಸಿದೆ ಅವನ ಛೇದಿಸಿದೆ || ಆದಿ ನಿಗಮವ ತಂದು ಕಮಲಜನಿಗಿತ್ತೆ | ವೇದಾಂತವೇದ್ಯ ಮತ್ಸ್ಯಾವತಾರ ಶರಣು || ೨೪ ||

ಸುರುಳಿ ಸುತ್ತಿದ ಭೂಮಿ ದಾಡೆಯಲಿ ತಂದೆ | ದುರುಳ ಹಿರಣ್ಯಾಕ್ಷನನು ಬೇಗದಲಿ ಕೊಂದೆ || ಧರಣಿದೇವಿಯನು ಸದಮಲದೊಳು ಗೆದ್ದೆ | ವರಹಾವತಾರ ಶ್ರೀಹರಿ ನಿನಗೆ ಶರಣು || ೨೬ ||

ಬಾಲಕನು ಕರೆಯಲಿಕೆ ಕಂಬದಲಿ ಬಂದೆ | ಸೀಳಿ ರಕ್ಕಸನ ಕರುಳಿನ ಮಾಲೆ ಹಾಕಿದೆ || ಶೀಲ ಪ್ರಲ್ಹಾದನಿಗೆ ಅಭಯವನು ಇತ್ತೆ | ಶ್ರೀಲಕ್ಷ್ಮಿಪೊಡನಿದ್ದ ನರಸಿಂಹ ಶರನು || ೨೭ ||

ಹರನ ಬಿಲ್ಲನೆ ಮುರಿದು ಧರಣಿಜೆಯ ತಂದೆ | ದುರುಳ ರಾವಣಶಿರಗಳ ಹತ್ತು ತರಿದೆ || ವರ ವಿಭೀಷಣಗವನ ರಾಜ್ಯ ಗಳನಿತ್ತೆ | ಶರಣರಕ್ಷಕ ಸೀತಾಪತಿ ರಾಮ ಶರಣು || ೩೦ ||

ಮಧುರೆಯಲಿ ಹುಟ್ಟಿ ಗೋಕುಲದಲಿ ಬೆಳೆದೆ | ತರಳತನದಲಿ ಹಾಲು ಬೆಣ್ಣೆಗಳ ಮೆದ್ದೆ || ತರುವ ಕಾಯುತ ಕೊಂದೆ ಹಲವು ರಕ್ಕಸರ | ಬಲರಾಮಕೃಷ್ಣ ಗೋಪಾಲಕನೆ ಶರಣು || ೩೧ ||

ಅರಿಯದಂತಿರದೆ ಅಚ್ಯುತ ರಕ್ಷಿಸೆನ್ನ | ಮರೆಯೆ ದೆಂದಿರದೆ ಮಾಧವ ರಕ್ಷಿಸೆನ್ನ || ಕೆಳೆನೆಂದೆನದೆ ಕೇಶವ ರಕ್ಷಿಸೆನ್ನ | ಕಾಣಿನೆಂದೆನದೆ ಕರುಣಿಸಿ ರಕ್ಷಿಸೆನ್ನ || ೩೪ ||

ಕ್ಷಿರಾಬ್ಧಿಯಲಿ ವೈಕುಂಠ ನೆಲಸಿದ್ಧ | ಶೇಷನಾ ಹಾಸಿಗೆಯ ಮೇಲೆ ಕುಳ್ಳಿರ್ದ || ಶ್ರೀಲಕ್ಷ್ಮೀ ಸಮ್ಮೇಳನದಿಂದ ಒಪ್ಪಿರಲು | ಆಲಯಿಸಿ ಕೇಳಿದನೆ ಅಜನನೆ ಅಜನ ಪೆತ್ತವನು || ೩೬ ||

ಶಂಕಚಕ್ರಗಳಿಲ್ಲವೆಂದು ಶಂಕಿಸದೇ | ಬಿಂಕದಿಂ ಗರುಡನ್ನ ಪಗಲೇರಿಸಿಕೊಳದೆ || ಪಂಕಜಾಕ್ಷಿಯ ಕೂಡ ತಾನು ಉಸಿರಿಸದೆ | ಪಂಕಜನಾಭ ಬಂದನು ಕೊಳದ ಕಡೆಗೆ || ೩೭ ||

ಜಯಜಯ ಜಗನ್ನಾಥ ಜಯ ವಿಶ್ವಮೂರ್ತಿ | ಜಯ ಜಯ ಜನಾರ್ಧನ ಜಯ ವಿಶ್ವರೂಪ || ಜಯತು ಸರ್ವೋತ್ತಮನೆ ಕ್ಷಿರಾಬ್ಧಿಶಯನ | ಜಯವೆಂದು ಪದಗಳಿಗೆ ಬಂದು ಎರಗಿದನು || ೪೫ ||

ಹೊತ್ತಾರೆ ಎದ್ದು ಈ ಕಥೆ ಹೇಳಿ ಕೇಳಿದವರಿಗೆ | ದುಃಸ್ವಪ್ನ ದುರ್ಬುಧಿ ದುರ್ವ್ಯಸನ ಕಳೆವದು || ಸರ್ಪಾರಿ ವಾಹನನ ಧ್ಯಾನ ದೊಳಗಿರಲು | ಸತ್ಸಂಗ ಸಾಯುಜ್ಯ ಪದವಿ ದೊರಕುಪುದು || ೪೮ ||

ಹರಿಯ ನೆನೆ ಹರಿಯ ನೆನೆ ಹರಿಯ ನೆನೆ ಮನವೆ | ಮರೆಯದಲೆ ಮಾಧವನ ನೆನೆ ಕಂಡ್ಯ ಮನವೆ || ಹರಿಯ ನೆನೆದವರಿಗೆ ಪರಮ ಪದವಿಯು ಉಂಟು | ಕರಿರಾಜವರದನ್ನ ಶರಣೆಂದು ಭಜಿಸು || ೪೯ ||

ಜಯತು ದ್ರುವರಾಯನಿಗೆ ವರವಿತ್ತ ದೇವ | ಜಯತು ಪ್ರಲ್ಹಾದಭಯವಿತ್ತ ದೇವ || ಜಯತು ದ್ರೌಪದಿಯಭಿಮಾನ ಕಾಯ್ದು ದೇವಾ | ಜಯತು ಜಯ ಹಯವದನ ಶ್ರೀವಾಸುದೇವ || ೫೦ ||